ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲಿ ಕಾಂಗ್ರೆಸ್ ಕೆಲ ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಇನ್ನು ಹಲವು ಕ್ಷೇತ್ರಗಳಲ್ಲಿ ಇನ್ನೇನು ಕೆಲವೇ ಸಮಯದಲ್ಲಿ ಗೆಲುವು ಘೋಷಣೆಯಾಗಲಿದೆ. ಈ ಗೆಲುವಿನಲ್ಲಿ ನಮ್ಮ ಪಾಲೂ ಇದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ತೆಲಂಗಾಣದಲ್ಲಿ ಜನರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಲು ನಾವು ಕಾರಣರು. ೭೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಖಂಡಿತ. ನಮ್ಮದು ಟೀಂ ವರ್ಕ್, ಈ ಕೆಲಸ ಜನರಿಗೆ ಕಾಣಿಸಿದೆ. ಅದಕ್ಕಾಗಿ ನಮ್ಮನ್ನು ಗೆಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.