ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕಲ್ ಸರ್ವೀಸಸ್ (ರೈಟ್ಸ್) ನಲ್ಲಿ 257 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ, ಐಟಿಐ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು.
ಈ ಹುದ್ದೆಗೆ ಅಭ್ಯರ್ಥಿಗಳನ್ನು ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ ಮೂಲಕ ಡಿಸೆಂಬರ್ 20,2023ರೊಳಗೆ ಅರ್ಜಿಯನ್ನು ಹಾಕಬಹುದು.