ಇತ್ತ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ: ಅತ್ತ I.N.D.I.A ಕೂಟದ ಸಭೆಗೆ ಕಾಂಗ್ರೆಸ್ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಅತ್ತ ಹೊರಬೀಳುತ್ತಿದ್ದು, ಇದರ ಬೆನ್ನಲ್ಲೇ ಡಿಸೆಂಬರ್ 6 ರಂದು I.N.D.I.A. ಮೈತ್ರಿಕೂಟದ ನಾಯಕರ ಸಭೆ ಕರೆಯಲಾಗಿದೆ.

ಡಿಸೆಂಬರ್ 6 ರಂದು ಮುಂದಿನ ಭಾರತ ಮೈತ್ರಿ ಸಭೆಗೆ ಕಾಂಗ್ರೆಸ್ (Congress) ಪಕ್ಷ ಕರೆ ನೀಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲಾಗುವುದು ಎಂದು ಮೈತ್ರಿ ಸದಸ್ಯರಿಗೆ ತಿಳಿಸಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ತೆಲಂಗಾಣ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು,. ಈಗಾಗಲೇ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇನ್ನು ಮಿಜೋರಾಂ ರಾಜ್ಯದ ಚುನಾವಣಾ ಫಲಿತಾಂಶವು ಸೋಮವಾರ ಪ್ರಕಟವಾಗಲಿದೆ.

ಇಂದು ಹೊರಬೀಳಲಿರುವ ಚುನಾವಣಾ ಫಲಿತಾಂಶಗಳು ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ನಿರ್ಣಾಯಕ ಮುನ್ನುಡಿ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!