ಜನಾದೇಶವನ್ನು ಸ್ವೀಕರಿಸುತ್ತೇವೆ, ಸಮರ ಮುಂದುವರಿಯುತ್ತದೆ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ (Assembly Elections 2023) ಪ್ರಕಟವಾಗಿದ್ದು, ಕಾಂಗ್ರೆಸ್ ತೆಲಂಗಾಣದಲ್ಲಿ ಜಯಭೇರಿ ಭಾರಿಸಿದ್ದು, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್​ಗಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) , ಜನತಾ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುವುದಾಗಿ ಹೇಳಿದ್ದಾರೆ. ಆದರೆ, ಪಕ್ಷದ ತಾತ್ವಿಕ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.

‘ಮಧ್ಯಪ್ರದೇಶ, ಛತ್ತೀಸ್​ಗಡ್ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಜನಾದೇಶವನ್ನು ನಾವು ಸ್ವೀಕರಿಸುತ್ತೇವೆ. ಆದರೆ, ವೈಚಾರಿಕ ಸಮರ ಮುಂದುವರಿಯುತ್ತದೆ,’ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವನ್ನು ಸ್ವಾಗತಿಸಿರುವ ಅವರು ಅಲ್ಲಿನ ಜನತೆಗೆ ಧನ್ಯವಾದ ಹೇಳಿದ್ದಾರೆ.‘ಪ್ರಜಾಲು ತೆಲಂಗಾಣ ನಿರ್ಮಿಸುವ ನಮ್ಮ ಭರವಸೆಯನ್ನು ಖಂಡಿತವಾಗಿ ಈಡೇರಿಸುತ್ತೇವೆ,’ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!