ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಮೂರು ಪ್ರಮುಖ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದ್ದು, ಈ ಹಿನ್ನೆಲೆ ದೆಹಲಿಯ ಬಿಜೆಪಿ ಪ್ರದಾನ ಕಚೇರಿಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.
ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಮೀಕ್ಷೆಗಳನ್ನು ಮೀರಿ ಗೆಲುವು ಸಾಧಿಸುವ ಸಾಧ್ಯತೆ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.