ವಕೀಲ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಪ್ರಕರಣ: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದೆ.

ಹೆಲ್ಮೆಟ್ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ವಕೀಲ ಪ್ರೀತಂ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಚಿಕ್ಕಮಗಳೂರು ಠಾಣೆಯ ಪಿಎಸ್ ಐ ಸೇರಿ 6 ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.6 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿತ್ತು.

ಇದೀಗ ವಕೀಲನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!