ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ (HD Deve Gowda) ಅವರು ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ದೇವೇಗೌಡ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ನನ್ನ ಪಕ್ಷವು ಬಿಜೆಪಿಯ ಉನ್ನತ ನಾಯಕತ್ವವನ್ನು, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತದೆ ಎಂದಿದ್ದಾರೆ.
ನರೇಂದ್ರ ಮೋದಿಯವರ ಅವರ ಅದ್ಭುತ ಪ್ರದರ್ಶನಕ್ಕೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ 2023 ರ ಫಲಿತಾಂಶ ಸಾಕ್ಷಿಯಾಗಿದೆ ಎಂದರು.