ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು ತಮಿಳುನಾಡಿನಲ್ಲಿ ಅಬ್ಬರದ ಮಳೆಯಾಗುತ್ತಿದೆ.
ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿದ್ದು, ರಸ್ತೆಗಳು ಜಲಾವೃತವಾಗಿವೆ.
ಮಿಂಚಾಂಗ್ ಚಂಡಮಾರುತದಿಂದಾಗಿ ಡಿ.5ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮಳೆಯಿಂದಾಗಿ ವಿಮಾನ ಹಾರಾಟ ಸ್ಥಗಿತಗೊಂಡಿದೆ.
#WATCH | Tamil Nadu: A car was seen stuck in the massive waterlogging in Chennai’s Velachery and Pallikaranai areas, caused due to heavy rainfall
(Video source: A local present at the site of the incident) pic.twitter.com/Lvl9MJnw0N
— ANI (@ANI) December 4, 2023
ಚೆನ್ನೈ, ತಿರುವಲ್ಲೂರು, ಚೆಂಗಲ್ಪಟ್ಟು, ಕಾಂಚೀಪುರಂನಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೀಚ್ಗಳಿಗೆ ಭೇಟಿ ನೀಡದಂತೆಯೂ ಸೂಚನೆ ನೀಡಲಾಗಿದೆ. ವಿಮಾನ ಅಷ್ಟೇ ಅಲ್ಲದೆ ಒಟ್ಟಾರೆ 144 ರೈಲುಗಳ ಸಂಚಾರವನ್ನೂ ರದ್ದು ಮಾಡಲಾಗಿದೆ.