ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ (Hassan) ಜಿಲ್ಲೆ, ಸಕಲೇಶಪುರ (Sakleshpura) ತಾಲೂಕಿನ ಯಸಳೂರು ಬಳಿ ಕಾಡಾನೆ ದಾಳಿಗೆ ಕ್ಯಾಪ್ಟನ್ ಅರ್ಜುನ (Arjuna) ಸಾವನ್ನಪ್ಪಿದ ಘಟನೆ ನಡೆದಿದೆ.
ನಾಲ್ಕು ಸಾಕಾನೆಗಳೊಂದಿಗೆ ಇಂದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಡಾನೆ (Wild Elephant) ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿದೆ.
ಸಾಕಾನೆ ಅರ್ಜುನ ಒಂಟಿಸಲಗದ ಜೊತೆ ಕಾಳಗಕ್ಕಿಳಿದಿದೆ. ಮದಗಜಗಳ ಕಾಳಗದಲ್ಲಿ ಅರ್ಜುನ ಸಾವನ್ನಪ್ಪಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.