ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚ ರಾಜ್ಯಗಳ ಚುನಾವಣೆ ಬಳಿಕ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಇಂದು ಬೆಳಗ್ಗೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಭರ್ಜರಿ ಸ್ವಾಗತ ನೀಡಲಾಗಿದೆ.
ಮೂರು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಒಂದು ದಿನದ ನಂತರ ಲೋಕಸಭೆಯಲ್ಲಿ ಸಂಸದರು ಘೋಷಣೆಗಳನ್ನು ಕೂಗಿದ್ದಾರೆ.
ಲೋಕಸಭೆಯಲ್ಲಿ ಮೂರನೇ ಬಾರಿ ಮೋದಿ ಸರ್ಕಾರ ಹಾಗೂ ಮತ್ತೆ ಮತ್ತೆ ಮೋದಿ ಸರ್ಕಾರ ಎಂಬ ಘೋಷಣೆಗಳು ಪ್ರತಿಧ್ವನಿಸಿದೆ. ಸಂಸತ್ತಿನ ಕಲಾಪ ಸೋಮವಾರ ಆರಂಭವಾಗಿದ್ದು, ಚಳಿಗಾಲದ ಅಧಿವೇಶನ ಶುರುವಾಗ್ತಿದ್ದಂತೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಬಿಜೆಪಿ ಸಂಸದರು ಈ ಘೋಷಣೆಗಳನ್ನು ಕೂಗಿದ್ದಾರೆ.
तीसरी बार मोदी सरकार
बार-बार मोदी सरकार#WinterSession2023 #ParliamentSession #ModiKiGuarantee #मोदी_है_तो_मुमकिन_है pic.twitter.com/WwhZAtJvbC— Col Rajyavardhan Rathore (@Ra_THORe) December 4, 2023
ಲೋಕಸಭೆ ಅಧಿವೇಶನದಲ್ಲಿ ಪ್ರಧಾನಿ ತಮ್ಮ ಸಂಪುಟದ ಸಹೋದ್ಯೋಗಿಗಳಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರೊಂದಿಗೆ ಮೊದಲ ಸಾಲಿನಲ್ಲಿ ಕುಳಿತಿದ್ದರು. ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅವರ ಹಿಂದೆ ಸಾಲು ಸಾಲಾಗಿ ಬಿಜೆಪಿ ಸಂಸದರು ಚಪ್ಪಾಳೆ ತಟ್ಟಿ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.