ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಸೇರಿದಂತೆ ಒಟ್ಟಾರೆ 63 ಕಡೆ ಇಂದು ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನ, ವಜ್ರ ಹಾಗೂ ನಗದು ವಶಪಡಿಸಿಕೊಂಡಿದೆ.
ಸುಮಾರು 200 ಕ್ಕೂ ಹೆಚ್ಚು ಅಧಿಕಾರಿಗಳ ಮನೆ, ಕಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಒಟ್ಟಾರೆ 25 ಲಕ್ಷ ರೂಪಾಯಿ ಮೌಲ್ಯದ ವಜ್ರ, ಮೂರು ಕೆಜಿ ಚಿನ್ನ ಹಾಗೂ 93ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.
ಜಕ್ಕೂರಿನಲ್ಲಿರುವ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್‌ಡಿ ಚನ್ನಕೇಶವ ಮನೆಯಲ್ಲಿ ಆರು ಲಕ್ಷ ರೂಪಾಯಿ ನಗದು, ಮೂರು ಕೆಜಿ ಚಿನ್ನ, 25 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ವಜ್ರ, ಐದು ಲಕ್ಷ ರೂಪಾಯಿ ಮೌಲ್ಯದ ಆಂಟಿಕ್ ಪೀಸ್‌ಗಳು ಪತ್ತೆಯಾಗಿವೆ ಎನ್ನಲಾಗಿದೆ.