ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾ (Karni Sena chief) ಮುಖ್ಯಸ್ಥ ಸುಖ್ದೇವ್ ಸಿಂಗ್ ಗೊಗಮೆಡಿಯವರು ಅಪರಿಚಿತರ ಗುಂಡೇಟಿಗೆ ಬಲಿಯಾಗಿದ್ದಾರೆ.
ಜೈಪುರದಲ್ಲಿ ಹಾಡಹಗಲೇ ಮಧ್ಯಾಹ್ನ 1.45ರ ಸುಮಾರಿಗೆ ಸುಖ್ದೇವ್ ಸಿಂಗ್ ಅವರು ತಮ್ಮ ಮನೆಯ ಆವರಣದಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ಸ್ಕೂಟರ್ನಲ್ಲಿ ಎಂಟ್ರಿಕೊಟ್ಟ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತ ಗುಂಡಿನ ದಾಳಿಯಿಂದ ಗಂಭೀರ ಗಾಯಗೊಂಡ ಸುಖ್ದೇವ್ ಸಿಂಗ್ (Sukhdev Singh Gogamedi) ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದರು. ಇನ್ನು ಇವರ ಜೊತೆಗಿದ್ದ ಅಜಿತ್ ಸಿಂಗ್ಗೂ ಗಂಭೀರ ಗಾಯಗಳಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.