ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ.
ಲೋಕಸಭೆ ಚುನಾವಣೆ (Lok Sabha Election) ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು.
ಆದ್ರೆ ಮಿಚಾಂಗ್ ಚಂಡಮಾರುತದಿಂದ (Cyclone Michaung) ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರು ದೆಹಲಿಗೆ ಭೇಟಿ ನೀಡಲು ಮತ್ತು ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಇತ್ತ ನಿತೀಶ್ ಕುಮಾರ್ ಅವರು ಅಸ್ವಸ್ಥರಾಗಿದ್ದು, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಸಭೆಗೆ ಗೈರಾಗುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರು.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡಾ ಸಭೆಯಲ್ಲಿ ಭಾಗಿಯಾಗಿರುವ ಖಚಿತ ಪಡಿಸಿದ್ದರು. ಆಮ್ ಆದ್ಮಿ ಪಕ್ಷವು ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಯಾವುದೇ ದೃಢೀಕರಣ ನೀಡಿರಲಿಲ್ಲ.
ಹೀಗಾಗಿ ಮುಂದಿನ ಎರಡು ವಾರಗಳಲ್ಲಿ ಮತ್ತೆ ಸಭೆಗೆ ದಿನಾಂಕ ನಿಗದಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ. ಸಭೆ ರದ್ದಾದ ಹಿನ್ನಲೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.