ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮುಖಂಡ ಪೃಥ್ವಿ ಸಿಂಗ್ (Pruthwi Singh) ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ (Channaraj Hattiholi), ಅವರ ಇಬ್ಬರು ಆಪ್ತರು ಹಾಗೂ ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 1860 (U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್, ಐಪಿಸಿ ಸೆಕ್ಷನ್ 1989 (u/s-3(1), (r)(s), 3(2)(v-a), IPC 1860(u/s-149 ರಡಿ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಆಪ್ತ ಸುಜಿತ್ ಜಾಧವ್, ಸದ್ದಾಂ, ಚನ್ನರಾಜ ಹಟ್ಟಿಹೊಳಿಯ ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪೃಥ್ವಿ ಸಿಂಗ್ ಮೇಲೆ ಸೋಮವಾರ ಚಾಕುವಿನಿಂದ ಇರಿಯಲಾಗಿತ್ತು. ಅದಾದ 18 ಗಂಟೆಗಳ ಬಳಿಕ, ಅಂದರೆ ಮಂಗಳವಾರ ಮಧ್ಯಾಹ್ನ ಆರೋಪಿಗಳ ವಿರುದ್ಧ ಪೃಥ್ವಿ ಸಿಂಗ್ ಪುತ್ರ ಎಪಿಎಂಸಿ ಠಾಣೆಗೆ ದೂರು ನೀಡಿದ್ದಾರೆ.