ಬೈಕ್‌ಗೆ ಲಾರಿ ಡಿಕ್ಕಿ: ಸವಾರ ಸಾವು

ಹೊಸದಿಗಂತ ವರದಿ, ನಂಜನಗೂಡು:

ಬೈಕ್‌ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಲ್ಲನ ಮೂಲೆ ಮಠದ ಬಳಿ ನಡೆದಿದೆ.
ನಂಜನಗೂಡಿನ ಚಾಮಲಾಪುರದ ಹುಂಡಿ ಬಡಾವಣೆಯ ನಿವಾಸಿ ಶಂಕರ್ (61) ಮೃತ ದುರ್ದೈವಿ. ಇವರು ಬೈಕ್ ನಲ್ಲಿ ಮಲ್ಲನ ಮೂಲೆ ಮಠದ ಬಳಿ ಬೈಕ್‌ನಲ್ಲಿ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಇಂದಿನಿAದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಅವರನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ನಂಜನಗೂಡು ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!