ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳವಾರ ನಡೆದ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಗುಂಡಿಕ್ಕಿ ಹತ್ಯೆ ಕೃತ್ಯ ಖಂಡಿಸಿ ಇಂದು ರಾಜಸ್ಥಾನ ಬಂದ್ ಗೆ ಕರೆ ನೀಡಲಾಗಿದೆ.
ಡಿಸೆಂಬರ್ 3 ರಂದು ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಸೋತಿತ್ತು, ಕರ್ಣಿ ಸೇನೆಯನ್ನು ನಿರ್ಲಕ್ಷಿಸಿದ್ದರಿಂದ ಕಾಂಗ್ರೆಸ್ ಸೋತಿದೆ ಎಂದು ಗೊಗಮೆಡಿ ಎಕ್ಸ್ನಲ್ಲಿ ಬರೆದಿದ್ದರು. ಇದಾದ ಬಳಿಕ ಮಂಗಳವಾರ ಮಧ್ಯಾಹ್ನ ಶ್ಯಾಮ್ ನಗರ ಪ್ರದೇಶದಲ್ಲಿ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಹತ್ಯೆ ಮಾಡಲಾಗಿತ್ತು. ರೋಹಿತ್ ಗೋಡಾರಾ ಗ್ಯಾಂಗ್ ಗೊಗಮಡಿಯನ್ನು ಹತ್ಯೆ ಮಾಡಿದ್ದು ನಾವೇ ಎಂದು ಒಪ್ಪಿಕೊಂಡಿದೆ.
ಸುಖದೇವ್ ಹತ್ಯೆಯ ನಂತರ ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಪ್ರತಿಭಟನೆಯ ಸುದ್ದಿಗಳು ಕೇಳಿಬರುತ್ತಿವೆ. ಈ ಹತ್ಯೆಯ ನಂತರ ಆರೋಪಿಗಳ ಹುಡುಕಾಟದಲ್ಲಿ ಪೊಲೀಸರ ತಂಡ ನಿರತವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಡಿಜಿಪಿ ಉಮೇಶ್ ಮಿಶ್ರಾ ಹೇಳಿದ್ದಾರೆ.