ಹೊಸದಿಗಂತ ಡಿಜಿಟಲ್ ಡೆಸ್ಕ್:
ವುಮೆನ್ಸ್ ಪ್ರೀಮಿಯರ್ ಲೀಗ್ 2026ರ ಸೀಸನ್‌ಗೆ ಗುಜರಾತ್ ಜೈಂಟ್ಸ್ ತಂಡವು ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಆಸ್ಟ್ರೇಲಿಯಾ ಆಲ್‌ರೌಂಡರ್ ಆಶ್ಲೇ ಗಾರ್ಡ್ನರ್ ಅವರನ್ನು ಮುಂದಿನ ಸೀಸನ್‌ಗೆ ತಂಡದ ನಾಯಕಿಯಾಗಿ ನೇಮಕ ಮಾಡಲಾಗಿದೆ ಎಂದು ಫ್ರಾಂಚೈಸಿ ಅಧಿಕೃತವಾಗಿ ಘೋಷಿಸಿದೆ.
ಕಳೆದ ಸೀಸನ್‌ನಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಬೆತ್ ಮೂನಿ ಮುನ್ನಡೆಸಿದ್ದರು. ಆದರೆ ಅವರ ನಾಯಕತ್ವದಲ್ಲಿ ತಂಡ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿತ್ತು. 2025ರ ಆವೃತ್ತಿಯಲ್ಲಿ ತಂಡ ಕೇವಲ ನಾಲ್ಕು ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಫ್ರಾಂಚೈಸಿ ನಾಯಕತ್ವ ಬದಲಾವಣೆಗೆ ಮುಂದಾಗಿದೆ.
ಇದೀಗ ಅನುಭವೀ ಆಸ್ಟ್ರೇಲಿಯನ್ ಆಟಗಾರ್ತಿ ಆಶ್ಲೇ ಗಾರ್ಡ್ನರ್ ಕೈಗೆ ತಂಡದ ಕಪ್ತಾನ ಸ್ಥಾನ ನೀಡಲಾಗಿದ್ದು, ಅವರ ಆಲ್‌ರೌಂಡರ್ ಸಾಮರ್ಥ್ಯ ಮತ್ತು ನಾಯಕತ್ವ ಗುಣಗಳು ತಂಡಕ್ಕೆ ಹೊಸ ದಿಕ್ಕು ನೀಡಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
ಗುಜರಾತ್ ಜೈಂಟ್ಸ್ ತಂಡ: ಆಶ್ಲೇ ಗಾರ್ಡ್ನರ್ (ನಾಯಕಿ), ಭಾರತಿ ಫುಲ್ಮಾಲಿ, ಡೇನಿಯಲ್ ವ್ಯಾಟ್-ಹಾಡ್ಜ್, ಕನಿಕಾ ಅಹುಜಾ, ಸೋಫಿ ಡಿವೈನ್, ಕಶ್ವೀ ಗೌತಮ್, ಕಿಮ್ ಗಾರ್ತ್, ಅನುಷ್ಕಾ ಶರ್ಮಾ, ಆಯುಷಿ ಸೋನಿ, ಯಾಸ್ತಿಕಾ ಭಾಟಿಯಾ, ಬೆತ್ ಮೂನಿ, ಶಿವನ್ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ತನುಜಾ ಕನ್ವರ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಜಾರ್ಜಿಯಾ ವೇರ್ಹ್ಯಾಮ್ ಮತ್ತು ಹ್ಯಾಪಿ ಕುಮಾರಿ ತಂಡದಲ್ಲಿದ್ದಾರೆ.

