ಹೊಸದಿಗಂತ ವರದಿ ಶಿವಮೊಗ್ಗ:
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಹತ್ತಿರದ ಬಸವನಂದಿಹಳ್ಳಿ ವ್ಯಾಪ್ತಿಯ ಹುಲಿಗಿನ ಕೊಪ್ಪ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಬಂಧಿತರಿಂದ 26 ಕೆ.ಜಿ.ಶ್ರೀಗಂಧ ,2 ಕೈ ಗರಗಸ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಡಿಸಿಎಫ್ ಸಂತೋಷ್ ಕುಮಾರ್, ಎಸಿಎಫ್ ಸುರೇಶ್ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಶಗುಪ್ತ ಎ ಶೇಕ್, ಉಪ ವಲಯ ಅರಣ್ಯ ಅಧಿಕಾರಿ ಅಕ್ಷಯ್ ಕುಮಾರ್, ಪ್ರಸನ್ನ , ಮಲ್ಲಪ್ಪ,ಗಸ್ತು ಅರಣ್ಯ ಪಾಲಕ ಶಿವಶರಣ, ಲತೀಫ್ ಹಾಗೂ ಸಿಬ್ಬಂದಿ ಅರುಣ್ ಉಜ್ಜಪ್ಪ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.