ಐಸಿಸ್ ನಂಟು ಹೊಂದಿರುವನ ಜೊತೆ ಸಿಎಂ ಸಿದ್ಧರಾಮಯ್ಯ ವೇದಿಕೆ ಹಂಚಿಕೆ? ಶಾಸಕ ಯತ್ನಾಳ್ ಆರೋಪ ಏನು?

ಹೊಸದಿಗಂತ ಡಿಜಿಟಲ್‌ಡೆಸ್ಕ್:‌

ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರನ ಬೆಂಬಲಿಗನ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಫೋಟೋದಲ್ಲಿರುವ ವ್ಯಕ್ತಿ ತನ್ವೀರ್ ಪೀರಾ ಅವರು ಭಯೋತ್ಪಾದಕ ಸಹಾನುಭೂತಿ ಹೊಂದಿದ್ದು, ಅವರು ಮಧ್ಯಪ್ರಾಚ್ಯದಾದ್ಯಂತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಈ ಕೆಳೆಗೆ ಹಂಚಿಕೊಂಡ ಫೋಟೋಗಳು ತನ್ವೀರ್ ಪೀರಾ ಭಯೋತ್ಪಾದಕರ ಮೇಲೆ ಸಹಾನುಭೂತಿ ಮತ್ತು ರಾಡಿಕಲ್ ಇಸ್ಲಾಮಿಕ್ ಆಪರೇಟಿವ್‌ಗಳನ್ನು ಭೇಟಿಯಾಗಲು ಮಧ್ಯಪ್ರಾಚ್ಯಕ್ಕೆ ಇತ್ತೀಚಿಗೆ ಭೇಟಿ ನೀಡಿದ ಸನ್ನಿವೇಶಗಳಾಗಿವೆ’ ಎಂದು ಬರೆದುಕೊಂಡಿದ್ದಾರೆ.

ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ. ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!