ಬಿಜೆಪಿ ಮುಖಂಡನಿಗೆ ಚಾಕು ಇರಿತ ಪ್ರಕರಣ: ಸದನದ ಬಾವಿಗಿಳಿದು ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ಡೆಸ್ಕ್:‌
 
ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ವಿಧಾನಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಪ್ರಕರಣದ ವಿಷಯ ಪ್ರಸ್ತಾಪಿಸಿದರು.ಗೃಹ ಸಚಿವರು ಬಂದಾಗ ಈ ಬಗ್ಗೆ ಉತ್ತರ ಕೊಡಿಸುವುದಾಗಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.

ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಂದ ಬಳಿಕ ಉತ್ತರ ಕೊಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಆದರೂ ಸಿಟ್ಟಿಗೆದ್ದ ಬಿಜೆಪಿ ಹಾಗೂ ಜೆಡಿಎಸ್ ಸದದ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!