ಹೊಸದಿಗಂತ ಡಿಜಿಟಲ್ಡೆಸ್ಕ್:
ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಕಾಮಗಾರಿಯು ಅಂತಿಮ ಹಂತಕ್ಕೆ ತಲುಪಿದ್ದು, 2024ರ ಜನವರಿ 22ರಂದು ಪ್ರತಿಷ್ಠೆ ಕಾರ್ಯಕ್ರಮ ನಡೆಲಿದೆ.
ಈ ಕಾರ್ಯಕ್ರಮಕ್ಕೆ 8,000 ದೇಶದ ಗಣ್ಯರು ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟ್ ತಂಡದ ದಿಗ್ಗಜ ಮಾಜಿ ಆಟಗಾರ ಹಾಗೂ ಹಾಲಿ ಶ್ರೇಷ್ಠ ಕ್ರಿಕೆಟ್ ಆಟಗಾರನಿಗೆ ಆಹ್ವಾನ ನೀಡಲಾಗಿದೆ.
ಜನವರಿ 22ರಂದು ಇಡೀ ದೇಶವೇ ಕಾಯುವ ರಾಮ್ ಲಾಲಾನ ಮೂರ್ತಿಗೆ ಪ್ರಾಣ ಪ್ರತಿಷ್ಠಾನೆ ನಡೆಯಲಿದೆ. ನಂತರ ಇದನ್ನು ಗರ್ಭಗುಡಿಯಲ್ಲಿ ಇರಿಸಿ ಪೂಜೆ ಮಾಡಲಾಗುತ್ತದೆ. ಇದಕ್ಕಾಗಿ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ರಾಮಲಾಲಾ ಪ್ರಾಣ ಪ್ರತಿಷ್ಠಾಪನೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳು ತಯಾರಾಗಿದ್ದು, 8 ಸಾವಿರ ಗಣ್ಯರಿಗೆ ರವಾನಿಸಲಾಗಿದೆ. ಟೀಂ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿಗೂ ಆಹ್ವಾನ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ್ ಲಾಲಾನ ಮೂರ್ತಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರ ಜೊತೆ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ನಟರಾದ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ರತನ್ ಟಾಟಾ ಕೂಡ ಇರಲಿದ್ದಾರೆ ಎಂದು ತಿಳಿದುಬಂದಿದೆ.