ಹೊಸದಿಗಂತ ಡಿಜಿಟಲ್ಡೆಸ್ಕ್:
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಮುರಿದು ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಹೊರವಲಯದ ವಿಟ್ಲದ ಸಾಲೆತ್ತೂರು ಸಮೀಪ ನಡೆದಿದೆ.
ಸಾಲೆತ್ತೂರು ನಿವಾಸಿ ಗುಲಾಬಿ(48) ಮೃತ ದುರ್ದೈವಿ ಮಹಿಳೆ. ಗುಲಾಬಿ ಅವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದ್ದು ಅವರ ತಲೆಯ ಭಾಗಕ್ಕೆ ತೀವ್ರ ತರಹದ ಪೆಟ್ಟಾಗಿತ್ತು. ಕೂಡಲೇ ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.