ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಜೀವ ದಹನವಾಗಿದ್ದಾರೆ.
ದೇವಗಿರಿ ಬಂಬರಗಾ ಕ್ರಾಸ್ ಬಳಿ ಟಿಪ್ಪರ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು. ಕಾರ್‌ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಕುಟುಂಬವೊಂದು ಮದುವೆ ಮುಗಿಸಿಕೊಂಡು ಮನೆಗೆ ವಾಪಾಸಾಗುತ್ತಿತ್ತು. ನಾಲ್ವರಿದ್ದ ಕಾರು ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಡೀಸೆಲ್ ಟ್ಯಾಂಕ್ ಒಡೆದು ಕಾರು ಹಾಗೂ ಟಿಪ್ಪರ್ ಹೊತ್ತಿ ಉರಿದಿದೆ.
ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್ ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮೀಕ್ಷಾ ಡಿಯೇಕರ್ ಸಜೀವ ದಹನವಾಗಿದ್ದಾರೆ. ಇನ್ನಿಬ್ಬರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಹೇಶ್ ಹಾಗೂ ಸ್ನೇಹಾ ಎನ್ನುವವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟಿಪ್ಪರ್ ಡ್ರೈವರ್ ತಾನೇ ಬಂದು ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.