ರಾಜ್ಯದ ಪ್ರಗತಿಗೆ ಸದಾ ಬೆಂಬಲ ನೀಡುತ್ತೇನೆ: ತೆಲಂಗಾಣ ನೂತನ ಸಿಎಂಗೆ ಪ್ರಧಾನಿ ಮೋದಿ ಶುಭ ಹಾರೈಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ರೇವಂತ್ ರೆಡ್ಡಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿ ಅವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ನಾಗರಿಕರ ಕಲ್ಯಾಣಕ್ಕೆ ನಾನು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಹೈದರಾಬಾದ್‍ನ ಎಲ್‍ಬಿ ಸ್ಟೇಡಿಯಂನಲ್ಲಿ (LB Stadium Hyderabad) ನಡೆದ ಅದ್ಧೂರಿ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸೇರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಮಲ್ಲುಭಟ್ಟಿ ವಿಕ್ರಮಾರ್ಕ ಇಂದು ಪ್ರಮಾಣ ವಚನ ಸ್ವೀಕರಿಸಿದರು . ಇವರಿಗೆ ರಾಜ್ಯಪಾಲೆ ತಮಿಳಿಸೈ ಸುಂದರರಾಜನ್ ಅವರು ಪ್ರಮಾಣವಚನ ಬೋಧಿಸಿದರು

ಪ್ರಮಾಣವಚನದ ವೇಳೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!