ಬೆಳಗಾವಿ ಸುವರ್ಣಸೌಧದ ಬಳಿ ರೈತರಿಂದ ಪ್ರತಿಭಟನೆ: ಮನವೊಲಿಕೆಗೆ ಸಚಿವರಿಂದ ಹರಸಾಹಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಬೆಳಗಾವಿಯ ಸುವರ್ಣ ಸೌಧದ ಬಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು (farmers) ಪ್ರತಿಭಟನೆ ನಡೆಸಿದ್ದು, ಏಕಾಏಕಿ ಸರ್ವಿಸ್ ರಸ್ತೆಯಿಂದ ಸುವರ್ಣಸೌಧದ ಬಳಿಯ ರಾಷ್ಟ್ರೀಯ ಹೆದ್ದಾರಿ 4ಕ್ಕೆ ನುಗ್ಗಿದ್ದಾರೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಮೆರವಣಿಗೆಯಲ್ಲಿ ಬಂದಿದ್ದ ರೈತರು, ಸುವರ್ಣ ಗಾರ್ಡನ್​ನ ಟೆಂಟ್ ಬಳಿಗೆ ನೂರಾರು ರೈತರು ಆಗಮಿಸಿದ್ದಾರೆ.

ರೈತರ ಸಾಲಮನ್ನಾ ಮಾಡಬೇಕು, ಪ್ರತಿ ಎಕರೆಗೆ 36 ಸಾವಿರ ರೂ. ಪರಿಹಾರ ನೀಡಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಹಿತ ಕಾಪಾಡುತ್ತೆ ಮತಯಾಚನೆ ಮಾಡಿತ್ತು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪರ ಮತಯಾಚಿಸಿದ್ದೆವು. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಬರಬೇಕು ಎಂದಿದ್ದಾರೆ.

ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಸಚಿವ ಶಿವಾನಂದ ಪಾಟೀಲ್ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಕೆ ಮಾಡಲಾಗಿದೆ. ಈ ವೇಳೆ ಪ್ರತಿಭಟನಾನಿರತ ರೈತರ ಮನವೊಲಿಕೆಗೆ ಸಚಿವರಾದ ಚಲುವರಾಯಸ್ವಾಮಿ ಮತ್ತು ಶಿವಾನಂದ ಪಾಟೀಲ್ ಹರಸಾಹಸ ಪಟ್ಟಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 4 ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ರೈತರ ಪ್ರತಿಭಟನೆ ಬಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೂ ತಟ್ಟಿದೆ. ರೈತರು ರಾಷ್ಟ್ರೀಯ ಹೆದ್ದಾರಿ ತಡೆದಿದ್ದರಿಂದ ಟ್ರಾಫಿಕ್​ನಲ್ಲಿ ಸಿಲುಕಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!