ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಟ್ರಕ್ಕಿಂಗ್ (Trekking)ಬಂದಿದ್ದ ಯುವಕನ ಶವ 4 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ.
ಇದೀಗ ರಾಣಿಝರಿ ಪಾಯಿಂಟ್ (Rani Jhari Point)ನಿಂದ ಜಿಗಿದು ಟೆಕ್ಕಿ ಭರತ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಮುಂಜಾನೆ ಯುವಕ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ. ಗುಡ್ಡದ ತುದಿಯಲ್ಲಿ ಯುವಕನ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿತ್ತು.ವೀಕೆಂಡ್ ಹಿನ್ನೆಲೆ ಭರತ್ ಬೆಂಗಳೂರಿನಿಂದ ರಾಣಿಝರಿ ಪಾಯಿಂಟ್ಗೆ ಟ್ರಕ್ಕಿಂಗ್ ಎಂದು ಬಂದಿದ್ದ ಎನ್ನಲಾಗಿತ್ತು. ಬಳಿಕ ಯುವಕನಿಗಾಗಿ ಅರಣ್ಯ ಇಲಾಖೆ ಶೋಧ ನಡೆಸಿದ್ದರು.
ಇನ್ನು ಭರತ್ನನ್ನು ಪತ್ತೆ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸವನ್ನೇ ನಡೆಸಿದ್ದರು. ಗುಡ್ಡದ ಮೇಲೆ ಆತನ ವಸ್ತುಗಳು ಪತ್ತೆಯಾಗುತ್ತಿದ್ದಂತೆ ತೀವ್ರ ಕಾರ್ಯಾಚರಣೆ ನಡೆಸಿದ್ದರು. ಇದೀಗ ಭರತ್ನನ್ನು ಪತ್ತೆ ಮಾಡಿದ್ದು, 4 ಸಾವಿರ ಅಡಿ ಆಳದ ಪ್ರಪಾತದಲ್ಲಿರುವ ಆತನ ಶವವನ್ನು ಮೇಲೆತ್ತಲು ಹರಸಾಹಸ ಪಡುತ್ತಿದ್ದಾರೆ. ಈ ಕುರಿತು ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತ ಭರತ್ ಬಿ.ಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಕಂಪನಿ ಭರತ್ಗೆ 3 ತಿಂಗಳ ಸಂಬಳ ನೀಡಿ ಕೆಲಸದಿಂದ ತೆಗೆದು ಹಾಕಿತ್ತು ಎಂಬ ಬಗ್ಗೆ ಮಾಹಿತಿ ಕೂಡ ಸಿಕ್ಕಿದೆ. ಇದರಿಂದ ನೊಂದಿದ್ದ ಭರತ್ ತನ್ನ ಬೈಕ್ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ರಾಣಿಝರಿ ಪಾಯಿಂಟ್ ಬಂದಿದ್ದರು. ಮಗ ವಾಪಸ್ ಮನೆಗೆ ಬಾರದ ಕಾರಣ ಪೋಷಕರು, ಮಗನನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ಬಂದಿದ್ದರು.