ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ತಪ್ಪಿತಸರು ಯಾರೇ ಆಗಿದ್ದರೂ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅತ್ಯಂತ ಹೇಯ ಕೃತ್ಯವಾಗಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರನ್ನು ಕಾನೂನಿನಡಿ ತಂದು ಕಠಿಣ ಶಿಕ್ಷೆ ಕೊಡಿಸಲಾಗುತ್ತದೆ ಎಂದಿದ್ದಾರೆ.