ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370 ನೇ ವಿಧಿ ಅನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಈ ಬೆನ್ನಲ್ಲೇ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಇಂದು ಸಿಕ್ಕ ತೀರ್ಪು ಬರೀ ತೀರ್ಪಲ್ಲ ಭರವಸೆಯ ದಾರಿದೀಪವಾಗಿದೆ ಎಂದು ಹೇಳಿದ್ದಾರೆ.
2019ರ ಆಗಸ್ಟ್ 5ರಂದು ಭಾರತದ ಸಂಸತ್ತು ತೆಗೆದುಕೊಂಡ ಮಹತ್ವದ ನಿರ್ಧಾರವನ್ನು ಸಾಂವಿಧಾನಿಕವಾಗಿ ಎತ್ತಿ ಹಿಡಿಯಲಾಗಿದೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ಸಹೋದರ ಸಹೋದರಿಯರಿಗೆ ಭರವಸೆ ದೊರೆತಂತಾಗಿದೆ ಎಂದು ಹೇಳಿದ್ದಾರೆ.
ನಮ್ಮ ಸಮಾಜದ ಅತ್ಯಂತ ದುರ್ಬಲ ಮತ್ತು ಅಂಚಿನಲ್ಲಿರುವ ವರ್ಗಗಳಿಗೆ ಅದರ ಪ್ರಯೋಜನಗಳನ್ನು ವಿಸ್ತರಣೆ ಮಾಡಲು ನಾವು ನಿರ್ಧಾರ ಮಾಡಿದ್ದೇವೆ. ಇಂದಿನ ತೀರ್ಪು ಉಜ್ವಲ ಭವಿಷ್ಯದ ಭರವಸೆ ಎಂದು ಹೇಳಿದ್ದಾರೆ.