ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜ ಸೇವಕ, ಹಿರಿಯ ರಂಗ ಕಲಾವಿದ, ಕಾಪು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಲೀಲಾಧರ ಶೆಟ್ಟಿ ಹಾಗೂ ವಸುಂಧರಾ ಶೆಟ್ಟಿ ಅವರು ತಮ್ಮ ನಿವಾಸದಲ್ಲಿ ಸೀರೆ ಬಳಸಿ ನೇಣು ಬಿಗಿದುಕೊಂಡಿದ್ದಾರೆ.
ರಾತ್ರಿ 11:30 ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಡೆತ್‌ನೋಟ್ ಕೂಡ ಲಭ್ಯವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಪು ರಂಗತರಂಗ ತಂಡವನ್ನು ಮುನ್ನಡೆಸುತ್ತಿದ್ದ ಲೀಲಾಧರ ಶೆಟ್ಟಿ ಅವರು ಸಮಾಜ ಸೇವೆಗೂ ಹೆಸರಾಗಿದ್ದರು. ಸರಳ ಸಜ್ಜದ ವ್ಯಕ್ತಿಯಾದ ಇವರನ್ನು ಪ್ರೀತಿಯಿಂದ ಎಲ್ಲರೂ ಲೀಲಣ್ಣ ಎಂದೇ ಕರೆಯುತ್ತಿದ್ದರು. ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದರು.
ಆತ್ಮಹತ್ಯೆಗೆ ನಿಖರ ಕಾಣ ತಿಳಿದುಬಂದಿಲ್ಲ, ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಹೇಳಲಾಗುತ್ತಿದೆ. ರಂಗತರಂಗ ತಂಡದ ಸದಸ್ಯರು, ಕಾಪು ಜನತೆಗೆ ಇದು ಆಘಾತಕಾರಿ ವಿಷಯವಾಗಿದೆ. ಲೀಲಾಧರ ಶೆಟ್ಟಿ ದಂಪತಿ ಅಕಾಲಿಕ ಮರಣಕ್ಕೆ ಜನ ಕಂಬನಿ ಮಿಡಿಯುತ್ತಿದ್ದಾರೆ.