ಶಬರಿಮಲೆಯಲ್ಲಿ ಭಾರೀ ಜನದಟ್ಟಣೆ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಕೇರಳ ಸಿಎಂ ಪಿಣರಾಯಿ ವಿಜಯನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಶಬರಿಮಲೆಗೆ ಭಕ್ತರು ಧಾವಿಸಿದ್ದು, ಅದನ್ನು ನಿಯಂತ್ರಿಸಲು ಕೇರಳ ಸರ್ಕಾರ ವಿಫಲವಾಗಿದೆ.

ಶಬರಿಮಲೆಗೆ ತೆರಳಿದ್ದ ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು, ಅಯ್ಯಪ್ಪನ ದರ್ಶನ ಮಾಡಲಾಗದೆಯೇ ವಾಪಸ್ಸಾಗುತ್ತಿರುವ ಪರಿಸ್ಥಿತಿ ಎದುರಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಭಕ್ತರಿಂದ ಆಕ್ರೋಶ ಹಾಗೂ ಪ್ರತಿಭಟನೆ ವ್ಯಕ್ತವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು, ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದ್ದಾರೆ.

ದೇವಾಲಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ದೇವಾಲಯದ ಆವರಣದಲ್ಲಿ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಮಾಡಲಾಗಿರುವ ವ್ಯವಸ್ಥೆ ಹಾಗೂ ಸೌಕರ್ಯಗಳ ಬಗ್ಗೆ ತಿಳಿಸಬೇಕಿದೆ, ದಟ್ಟಣೆಯನ್ನು ನಿರ್ವಹಿಸಲು ಮತ್ತಷ್ಟು ಸಂಘಟಿತ ವ್ಯವಸ್ಥೆ ಖಾತ್ರಿಪಡಿಸಬೇಕು. ಯಾತ್ರಿಕರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದ್ದಾರೆ.

ಡಿಸೆಂಬರ್ 6 ರಿಂದ ಯಾತ್ರಿಕರ ಸಂಖ್ಯೆ 88,000 ಸಾವಿರಕ್ಕೆ ಏರಿಕೆಯಾಗಿರುವುದರಿಂದ ನೂಕುನುಗ್ಗಲು ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ದರ್ಶನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!