ಲೋಕಸಭೆಯಲ್ಲಿ ಭದ್ರತಾ ಲೋಪ: ತನಿಖೆಗೆ ಗೃಹ ಸಚಿವಾಲಯ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭೆ ಕಲಾಪದ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಸಿಆರ್‌ಪಿಎಫ್‌ನ ಡಿಜಿ ಅನೀಶ್ ದಯಾಳ್ ಸಿಂಗ್ ನೇತೃತ್ವದಲ್ಲಿ ಭದ್ರತಾ ಏಜೆನ್ಸಿಗಳ ಸದಸ್ಯರು ಮತ್ತು ತಜ್ಞರೊಂದಿಗೆ ತನಿಖಾ ಸಮಿತಿಯನ್ನು ರಚಿಸಲಾಗಿದೆ.

ತನಿಖಾ ಸಮಿತಿಯು ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸಲು ಕಾರಣ ಮೊದಲಾದ ವಿಚಾರಗಳ ತನಿಖೆ ನಡೆಸಲಿದ್ದು, ಬಳಿಕ ಮುಂದಿನ ಕ್ರಮವನ್ನು ಶಿಫಾರಸು ಮಾಡುತ್ತದೆ.

ತನಿಖಾ ಸಮಿತಿಯು ಇದರ ಜೊತೆಗೆ ಸಂಸತ್ತಿನಲ್ಲಿ ಭದ್ರತೆಯನ್ನು ಸುಧಾರಿಸುವ ಸಲಹೆಗಳನ್ನು ಒಳಗೊಂಡಂತೆ ಶಿಫಾರಸುಗಳೊಂದಿಗೆ ವರದಿಯನ್ನು ಶೀಘ್ರದಲ್ಲಿ ಸಲ್ಲಿಸಲಿದೆ ಎಂದು ಎಂಎಚ್‌ಎ ತಿಳಿಸಿದೆ.

ಬುಧವಾರ ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!