ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನಲ್ಲಿ ನಡೆದ ಭಾರೀ ಭದ್ರತಾ ಲೋಪಕ್ಕೆ (Security Breach in Lok Sabha) ಸಂಬಂಧಿಸಿದಂತೆ ಕೇಂದ್ರ ಸರಕಾರ ವಿರುದ್ಧ ವಿಪಕ್ಷಗಳು ಮುಗಿಬಿದ್ದಿದ್ದು, I.N.D.I.A ಕೂಟದ ನಾಯಕರು ಇಂದು ತುರ್ತು ಸಭೆ ನಡೆಸಲಿದ್ದಾರೆ.
ವಿಪಕ್ಷ ನಾಯಕರು ದಾಳಿಕೋರರಿಗೆ ಪಾಸ್ ನೀಡಿದ್ದಕ್ಕಾಗಿ ಪ್ರತಾಪ್ ಸಿಂಹ ವಜಾ ಮಾಡುವಂತೆ ಆಗ್ರಹಿಸಿದ್ದಾರೆ . ಜೊತೆಗೆ ತುರ್ತು ಸಭೆ ನಡಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ.
ಈ ಕುರಿತು ಮಾತನಾಡಿದ ಟಿಎಂಸಿ ಸಂಸದ ಸುದೀಪ್ ಬಂಡೋಪಾದ್ಯಾಯ, ‘ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.