ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿಯಲ್ಲಿ ಎಲ್ಲವು ಸರಿ ಇಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಈ ಹೊತ್ತಲ್ಲೇ ಬಿಜೆಪಿ ಪ್ರಮುಖ ನಾಯಕರಿಬ್ಬರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಶಾಸಕ S.T ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಔತಣಕೂಟದಲ್ಲಿ ಭಾಗವಹಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಕಾಂಗ್ರೆಸ್ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಅವರು ಭಾಗವಹಿಸಿದರು. ಇದರಿಂದ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆಯ ನಡುವೆಯೇ ಭಾಗಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.