ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಬುಧವಾರ ನಡೆದ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದು, ಇದು ನಮಗೆ ಎಚ್ಚರಿಕೆ ಗಂಟೆ ಎಂದು ಹೇಳಿದ್ದಾರೆ.
ಇಂದು ಯಾವಾಗ ಏನಾಗಬಹುದು ಎಂದು ಊಹೆ ಮಾಡಲು ಸಾಧ್ಯವಿಲ್ಲ. ಜನಸಾಮಾನ್ಯರು ಸಹಕಾರ ಕೊಡಬೇಕು. ಜನರಿಗೆ ಪಾಸ್ (Pass) ಕೊಡುವಾಗ ಅವರ ನೈಜತೆ ನೋಡಿಕೊಂಡು ಪಾಸ್ ಕೊಡಲು ಸೂಚಿಸಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ, ಸತ್ಪ್ರಜೆಗಳಿಗೆ ತೊಂದರೆ ಆಗದಂತೆ ಪಾಸ್ ವಿತರಣೆಗೆ ಸೂಚಿಸಲಾಗಿದೆ. ಹೆಚ್ಚು ತಪಾಸಣೆ ಮೂಲಕ ಸುವರ್ಣಸೌಧಕ್ಕೆ (Suvarna Soudha) ಪ್ರವೇಶ ನೀಡಲಾಗಿದೆ. ಜನ ಸಾಮಾನ್ಯರು ಸಹಕರಿಸಬೇಕು ಎಂದು ಹೇಳಿದರು.
ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದ್ದು ಪಾಸ್ ವಿತರಣೆ ವ್ಯವಸ್ಥೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ.