ಸಿಲಿಕಾನ್ ಸಿಟಿಯಲ್ಲಿ BMTC ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಮಹಿಳೆಯೊಬ್ಬರು ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ಮಡಿವಾಳ ಫ್ಲೈ ಓವರ್ ಬಳಿ ಈ ಘಟನೆ ನಡೆದಿದ್ದು, 21 ವರ್ಷದ ಸೀಮಾ ಎಂಬ ಮಹಿಳೆ ಬಿಎಂಟಿಸಿ ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳೆ ತನ್ನ ಪತಿ ಹಾಗೂ ಮಕ್ಕಳ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಸೀಮಾ ಮೇಲೆ ಬಸ್ ಹರಿದಿದೆ. ಪರಿಣಾಮ ಸೀಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!