ದೇಶದಲ್ಲಿ ಇಂದು ಹೇಗಿದೆ ನೋಡಿ ಚಿನ್ನ, ಬೆಳ್ಳಿ ಬೆಲೆ ದರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಇನ್ನು, ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ.

ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಹಾಗೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,765 , 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,289

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,120 , 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,312

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,750 , 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,890

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,650 ಆಗಿದ್ದು ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 58,200, ರೂ. 57,650 ಹಾಗೂ57,650 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಗುರುವಾರ 57,800 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಾಗಿದೆ.

ಬೆಳ್ಳಿ ದರ
ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!