ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ದೆಹಲಿ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.
ಸಂಸತ್ತಿನ ಭದ್ರತಾ ಉಲ್ಲಂಘನೆಯ ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಮತ್ತು ಅಮೋಲ್ ಶಿಂಧೆ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ(ಐಪಿಸಿ) ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆಯು ಯೋಜಿತ ದಾಳಿಯಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ದೆಹಲಿ ಪೊಲೀಸರು ಗುರುವಾರ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ಕಸ್ಟಡಿಗೆ ಕೋರಿದ್ದಾರೆ. ನ್ಯಾಯಾಲಯವು ನಾಲ್ವರು ಆರೋಪಿಗಳನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.