‘ಪರೀಕ್ಷಾ ಪೇ ಚರ್ಚಾ’ ಒತ್ತಡವನ್ನು ಮೀರಿ ಯಶಸ್ಸಿನತ್ತ ಸಾಗುವ ಗುರಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಪರೀಕ್ಷಾ ಪೇ ಚರ್ಚಾ’ ಸಂವಾದದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಯಶಸ್ಸಿನ ಸಲಹೆಗಳನ್ನು ನೀಡಿದರು. ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮವನ್ನು ನಡೆಸುತ್ತಿರುವ ಪ್ರಮುಖ ಉದ್ದೇಶವನ್ನು ತಿಳಿಸಿದ ಮೋದಿ, ಒತ್ತಡವನ್ನ ಮೀರಿ ಯಶಸ್ಸಿನತ್ತ ಸಾಗುವ ಗುರಿ ಆಗಿದೆ ಎಂದುಹೇಳಿದ್ದಾರೆ.

ವಿದ್ಯಾರ್ಥಿಗಳು ನಗುಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪರೀಕ್ಷಾ ಪೇ ಚರ್ಚಾವು ಒತ್ತಡವನ್ನು ನಿರ್ವಹಣೆ ಮಾಡಿ ಯಶಸ್ಸಿನತ್ತ ಸಾಗುವ ಗುರಿ ಹೊಂದಿದೆ. ವಿದ್ಯಾರ್ಥಿಗಳು ನಗುಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುತ್ತದೆ . ಯಾರಿಗೆ ಗೊತ್ತು ನಮ್ಮ ಈ ಸಂವಾದದ ಅಧಿವೇಶನದಲ್ಲಿ ಮುಂದಿನ ಅಧ್ಯಯನಕ್ಕೆ ಪ್ರೇರಣಾದಾಯಕವಾಗಲೂ ಬಹುದು ಎಂದು ಹೇಳಿದ್ದಾರೆ.

ಪ್ರತಿ ವರ್ಷ ಪ್ರಧಾನಿ ಮೋದಿ ಮಹತ್ವದ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ಮೂಲಕ ಎಸ್​​ಎಸ್​​​ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿ, ಮಕ್ಕಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ.

ಜೊತೆಗೆ ಯಾವ ರೀತಿ ಮಕ್ಕಳ ಓದಿನ ಒತ್ತಡ ನಿವಾರಿಸುವ ಕೆಲಸ ಮಾಡಬೇಕೆಂದು ಸಲಹೆ ನೀಡುತ್ತಾರೆ.

ಶಿಕ್ಷಣ ಸಚಿವಾಲಯ ಪರೀಕ್ಷಾ ಪೇ ಚರ್ಚಾದ 7ನೇ ಆವೃತ್ತಿಯ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. 2024 ಜನವರಿ 12 ಕಾರ್ಯಕ್ರಮಕ್ಕೆ ನೋಂದಾಯಿಸಲು ಕೊನೆಯ ದಿನಾಂಕ. ಕಾರ್ಯಕ್ರಮದ ದಿನಾಂಕವನ್ನು ಕೇಂದ್ರ ಶಿಕ್ಷಣ ಸಚಿವಾಲಯ ಶೀಘ್ರದಲ್ಲೇ ಪ್ರಕಟಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!