ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಿಂದ ಉಚ್ಚಾಟನೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಇಂದು ವಿಚಾರಣೆ ನಡೆಯಲಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್.ವಿ.ಭಟ್ಟಿ ಅವರನ್ನೊಳಗೊಂಡ ವಿಭಾಗಿಯ ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ.
ಉದ್ಯಮಿಯೊಬ್ಬರ ಹಿತಾಸಕ್ತಿಯ ರಕ್ಷಣೆಗಾಗಿ ಮಹುವಾ ಮೊಯಿತ್ರಾ ಅವರು, ಆ ಉದ್ಯಮಿಯಿಂದ ಅಕ್ರಮವಾಗಿ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಹೇಳಿರುವ ನೀತಿ ಸಮಿತಿಯ ವರದಿಯನ್ನು ಅಂಗೀಕರಿಸಿರುವ ಲೋಕಸಭೆಯು, ಮಹುವಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಚಾಟಿಸಿದೆ.