ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಂಪನಿಯ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕಾರ್ಮಿಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಲ್ಲಿನ ಟಿ.ದಾಸರಹಳ್ಳಿಯಲ್ಲಿ ಕೆಡಿಡಿಎಲ್ ವಾಚ್ ತಯಾರಿಕಾ ಕಂಪನಿಯ ಮ್ಯಾನೇಜರ್ ಹಾಗೂ ಸೂಪರ್ ವೈಸರ್ ಕಿರುಕುಳದಿಂದ ನೊಂದು ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಜೆ ತೆಗೆದುಕೊಂಡಿದ್ದಕ್ಕೆ ಕೆಲಸದಿಂದ ತೆಗೆದುಹಾಕುವುದಾಗಿ ಮ್ಯಾನೇಜರ್ ಬೆದರಿಕೆ ಹಾಕಿದ್ದರಂತೆ. ಈ ಹಿನ್ನೆಲೆಯಲ್ಲಿ ಮೊಬೈಲ್ ನಲ್ಲಿ ವಾಯ್ಸ್ ರೆಕಾರ್ಡ್ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಂಧ್ರಪ್ರದೇಶ ಮೂಲದ ಗುಡಿಬಂಡೆ ನಿವಾಸಿ 24 ವರ್ಷದ ಗೋವಿಂದ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಳೆದ 6 ವರ್ಷಗಳಿಂದ ಪೀಣ್ಯದ ಕೆಡಿಡಿಎಲ್ ವಾಚ್ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.