ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಗೆ ಕಾಂಗ್ರೆಸ್‌ ಹೈಕಮಾಂಡ್‌ ಬುಲಾವ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಹಿತ ಕೆಲ ಸಚಿವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬುಲಾವ್‌ ನೀಡಿದೆ.

ಡಿ. 18ರಂದು ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿದಂತೆ ಕೆಲ ಸಚಿವರನ್ನು ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.

ಈ ಕುರಿತು ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲ ಅವರು ಸಿಎಂ, ಡಿಸಿಎಂ ಹಾಗೂ ಕೆಲ ಸಚಿವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಡಿ. 18ರಂದು ದೆಹಲಿಗೆ ತೆರಳಲಿರುವ ನಾಯಕರು, ಡಿ. 20ರವರೆಗೆ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಡಿ. 21ರಂದು ಎಲ್ಲ ನಾಯಕರು ದೆಹಲಿಯಿಂದ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!