ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮವಾಗಿ ಆನ್ಲೈನ್ ಅಲ್ಲಿ ಬೆಟ್ಟಿಂಗ್ ದಂಧೆ ಪ್ರಕರಣ ಸಂಬಂಧ ಶಾಸಕ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದರು. ಕಳೆದ ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಇದೀಗ ಇಡೀ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಆನ್ಲೈನ್ ಮತ್ತು ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕರ್ನಾಟಕದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗ್ಯಾಂಗ್ಟಾಕ್‌ನಲ್ಲಿ ಬಂಧಿಸಿತ್ತು. ಇದೇ ವೇಳೆ ದಾಳಿಯ ವೇಳೆ ಭಾರೀ ಪ್ರಮಾಣದ ನಗದು ಹಾಗೂ ಚಿನ್ನಾಭರಣಗಳು ಪತ್ತೆಯಾಗಿತ್ತು.

