April 22, 2026
Wednesday, April 22, 2026
spot_img

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಯ ಹತ್ಯೆ: ಗಾರ್ಮೆಂಟ್ಸ್ ಫ್ಯಾಕ್ಟರಿ ಕೆಲಸದಲ್ಲಿರುವಾಗಲೇ ಗುಂಡಿನ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪ್ರತಿಭಟನೆ, ಹಿಂದುಗಳ ಮೇಲೆ ದಾಳಿ ಘಟನೆಗಳು ತೀವ್ರಗೊಳ್ಳುತ್ತಿದೆ. ದೀಪು ಚಂದ್ರದಾಸ್ ಮೇಲೆ ಉದ್ರಿಕ್ತರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಸುಲಿಗೆ ಆರೋಪದಡಿ ಹಿಂದು ಅಮೃತ್ ಮೊಂಡಲ್ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಇದೀಗ ಎರಡೇ ವಾರದಲ್ಲಿ ಮೂರನೇ ಹಿಂದುವಿನ ಹತ್ಯೆಯಾಗಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದು ನೌಕರನನ್ನು ಗುಂಡಿಕ್ಕು ಹತ್ಯೆ ಮಾಡಲಾಗಿದೆ.

ಬಾಂಗ್ಲಾದೇಶದಲ್ಲಿ ಹೆಜ್ಜೆ ಹೆಜ್ಜೆಗೂ ಗಾರ್ಮೆಂಟ್ಸ್ ಫ್ಯಾಕ್ಟರಿಗಳಿವೆ. ಅತೀ ಹೆಚ್ಚು ಟೆಕ್ಸ್‌ಟೈಲ್ ಇಂಡಸ್ಟ್ರಿ ಬಾಂಗ್ಲಾದೇಶದಲ್ಲಿದೆ. ಇಲ್ಲಿನ ಮೈಮೆನ್‌ಸಿಂಗ್ ಜಿಲ್ಲೆಯ ಲಬೀಬ್ ಗ್ರೂಪ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ನೌಕರನಾಗಿದ್ದ ಹಿಂದುವಿನ ಮೇಲೆ ಸಹೋದ್ಯೋಗಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಮೃತ ಹಿಂದುವನ್ನು 42 ವರ್ಷದ ಬಜೇಂದ್ರ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಬಡ ಬಜೇಂದ್ರ ಬಿಸ್ವಾಸ್ ಕುಟುಂಬ ಕಂಗಾಲಾಗಿದೆ.

ಲಬೀಬ್ ಗ್ರೂಪ್ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಬಜೇಂದ್ರ ಬಿಸ್ವಾಲ್ ಕರ್ತವ್ಯ ನಿರ್ವಹಿಸುತ್ತಿದ್ದ. ಆರೋಪಿ 29 ವರ್ಷದ ನೊನಮ್ ಮಿಯಾ ಕೂಡ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ. ಸೆಕ್ಯೂರಿಟಿ ಕೆಲಸಕ್ಕೆ ನೀಡಿದ್ದ ಶಾಟ್‌ಗನ್‌ನಿಂದ ದಾಳಿ ಮಾಡಲಾಗಿದೆ. ಕರ್ತವ್ಯದಲ್ಲಿರುವಾಗಲೇ ಈ ಘಟನೆ ನಡೆದಿದೆ.

ಗಾಯಗೊಂಡ ಬಜೇಂದ್ರ ದಾಸ್‌ನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡ ಬಜೇಂದ್ರ ಬಿಸ್ವಾಸ್ ಬದುಕುಳಿಯಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಬಜೇಂದ್ರ ಬಿಸ್ವಾಸ್ ಮೇಲೆ ಗುಂಡಿನ ದಾಳಿ ಮಾಡಿದ ಆರೋಪಿ ನಮೊನ್ ಮಿಯಾಯನನ್ನು ಪೊಲೀಸರು ವಶಕ್ಕೆ ವಿಚಾರಣೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !