ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ಬಯೋಕಾನ್ ಕಂಪನಿ ಉದ್ಯೋಗಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆನಂತ್ ಭಟ್ (35) ಆತ್ಮಹತ್ಯೆಗೆ ಶರಣಾಗಿರುವ ಉದ್ಯೋಗಿ ಎಂದು ತಿಳಿದುಬಂದಿದೆ.
ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದ ಬಯೋಕಾನ್ ಕಂಪನಿಯಲ್ಲಿ ನಡೆದಿದೆ.ಸದ್ಯ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅನಂತ್ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಅನಂತ್ ಭಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ತನಿಖೆಯ ನಂತರ ತಿಳಿದುಬರಲಿದೆ.

