ಹೊಸದಿಗಂತ, ವರದಿ,ಕೆ.ಆರ್.ಪೇಟೆ:
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಮೂಲಕ ವಿದ್ಯುತ್ ಪ್ರವಹಿಸಿ ರೈತನೊಬ್ಬ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನಲ್ಲಿ ನೆಡೆದಿದೆ.
ತಾಲ್ಲೂಕಿನ ಕಸಬಾ ಹೋಬಳಿ ಅರೆಬೂವನಹಳ್ಳಿ ಗ್ರಾಮದ ನಿವಾಸಿ ಮಂಜುನಾಥ(51) ಮೃತ ದುರ್ದೈವಿ.
ಮಂಜುನಾಥ್ ಇಂದು ಬೆಳಿಗ್ಗೆ ಒಂಭತ್ತು ಗಂಟೆಯ ಸುಮಾರಿಗೆ ತನ್ನ ಮನೆಯ ಸಮೀಪವೇ ಇದ್ದ ಜಮೀನಿಲ್ಲಿ ಕೆಲಸ ಮಾಡಲು ಹೊರಟಿದ್ದರು. ಈ ಸಮಯದಲ್ಲಿ ಜಮೀನಿನ ಬಳಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೇ ತಂತಿಯನ್ನು ತುಳಿದಿದ್ದಾರೆ ಪರಿಣಾಮ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಕೂಡಲೇ ಸೆಸ್ಕಾಂ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮೃತ ಮಂಜುನಾಥ್‌ರವರಿಗೆ ಪತ್ನಿ ಸೇರಿದಂತೆ ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ಈ ಸಂದರ್ಭದಲ್ಲಿ ಗ್ರಾ.ಪಂ.ಪಂಚಾಯತಿ ಮಾಜಿ ಅಧ್ಯಕ್ಷ ಚೌಡೇನಹಳ್ಳಿ ನಾಗರಾಜು, ವಕೀಲ ಕುರುಬಳ್ಳಿನಾಗೇಶ್, ಮಂಚನಹಳ್ಳಿ ನಾಗೇಗೌಡ ಇತರರು ಇದ್ದರು.