ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ 2 ರಂದು ಕೇರಳದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಎರಡು ಲಕ್ಷ ಮಹಿಳೆಯರು ಭಾಗವಹಿಸುವ ಬೃಹತ್ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಯಶಸ್ವಿಯಾಗಿ ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರನ್ನು ಅಭಿನಂದಿಸಲು ಕೇರಳ ಬಿಜೆಪಿ ಸ್ತ್ರೀ ಶಕ್ತಿ ಸಂಗಮ್ ಎಂಬ ಸಮಾವೇಶ ಆಯೋಜಿಸಿದೆ ಎಂದು ಪಕ್ಷದ ರಾಜ್ಯಾದ್ಯಕ್ಷ ಕೆ ಸುರೇಂದ್ರನ್ ಅವರು ಶುಕ್ರವಾರ ತಿಳಿಸಿದ್ದಾರೆ.
ಜನವರಿ 2 ರಂದು ತ್ರಿಶೂರದ ತೆಕ್ಕಿಂಕಾಡು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಉದ್ಯಮಿಗಳು, ಎಂಜಿಎನ್ಆರ್ಇಜಿಎ ಮತ್ತು ನೆರೆಹೊರೆ ಕಾರ್ಯಕರ್ತರು, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕರ್ತರು ಸೇರಿದಂತೆ ವಿವಿಧ ಹಿನ್ನೆಲೆಯ ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಆಗಮಿಸಲಿದ್ದು, ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸುರೇಂದ್ರನ್ ಸುದ್ದಿಗಾರರಿಗೆ ಹೇಳಿದ್ದಾರೆ.