ಶ್ರೀ ರಾಮನಿಗಾಗಿ ಈ ಸಮರ್ಪಣೆ: ಕರ್ನಾಟಕದಿಂದ ಅಯೋಧ್ಯೆಯತ್ತ ಹೊರಟಿದೆ ಘಂಟೆ, ಪೂಜಾ ಸಾಮಾಗ್ರಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ (Ayodhya Ram Mandir) ಲೋಕಾರ್ಪಣೆಗೆ ಸಜ್ಜಾಗುತ್ತಿದ್ದು, ದೇಶ ವಿದೇಶಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಮನೆ ಮನೆಗಳಲ್ಲಿ ದೀಪ ಬೆಳಗಿಸಲು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜಿಸಲು ಸಿದ್ಧತೆ ನಡೆಯುತ್ತಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.

2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!