ಟಿ20 ಕ್ರಿಕೆಟ್‌ ಗೆ ರೋಹಿತ್ ಶರ್ಮ ಹೇಳ್ತಾರಾ ವಿದಾಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್​ನಲ್ಲಿ ಆಡಲಿದ್ದಾರ? ಇಲ್ಲವಾ? ಎಂಬ ಚರ್ಚೆಗಳು ಕಳೆದ ಕೆಲವು ದಿನಗಳಿಂದ ಶುರುವಾಗಿದೆ.

ಅಚ್ಚರಿ ಎಂಬಂತೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರನ್ನು ಐಪಿಎಲ್ ನ ಮುಂಬೈ ಇಂಡಿಯನ್ಸ್‌ ತಂಡದ ನಾಯಕನನ್ನಾಗಿ ನೇಮಿಸಿ, ರೋಹಿತ್​ ಅವರನ್ನು ಈ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇದು ರೋಹಿತ್‌ ಶರ್ಮ ಅವರ ಟಿ20 ಕ್ರಿಕೆಟ್‌ ಬಾಳ್ವೆ ಬಹುತೇಕ ಕೊನೆಗೊಂಡಿರುವ ಸುಳಿವೊಂದನ್ನು ನೀಡಿದೆ.

ಕೆಲ ದಿನಗಳ ಹಿಂದೆ ರೋಹಿತ್​ ಅವರ ಟಿ20 ಭವಿಷ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಹೇಳಿಕೆಯೊಂದನ್ನು ನೀಡಿದ್ದರು. ‘ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಅವರ ಸ್ಥಾನದ ಬಗ್ಗೆ ಈಗಲೇ ಭರವಸೆ ನೀಡಲಾಗುವುದಿಲ್ಲ’ ಎಂದು ಹೇಳಿದ್ದರು.

ಹೀಗಾಗಿ ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್​ನಲ್ಲಿ ಆಡಲಿದ್ದಾರ? ಇಲ್ಲವಾ? ಅನುಮಾನಗಳು ಶುರುವಾಗಿದೆ.

ಟಿ20 ವಿಶ್ವಕಪ್​ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎ ಆತಿಥ್ಯದಲ್ಲಿ ನಡೆಯಲಿದೆ. ಸದ್ಯದ ಪ್ರಕಾರ ಈ ಟೂರ್ನಿ ಜೂನ್​ನಲ್ಲಿ ನಡೆಯುವ ಸಾಧ್ಯತೆ ಇದೆ.

ಇನ್ನೊಂದು ಮೂಲಗಳ ಪ್ರಕಾರ ರೋಹಿತ್​ ಶರ್ಮ ಮತ್ತು ವಿರಾಟ್​ ಕೊಹ್ಲಿ ಟಿ20 ಕ್ರಿಕೆಟ್​ನಿಂದ ಈಗಾಗಲೇ ದೂರ ಉಳಿಯಲು ನಿರ್ಧರಿಸಿದ್ದು ಕೇವಲ ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ಮಾತ್ರ ಗಮನ ನೀಡಲು ನಿರ್ಧರಿಸಿರುವುದಾಗಿ ವರದಿಯೊಂದು ತಿಳಿಸಿದೆ. ಏಕದಿನ ವಿಶ್ವಕಪ್​ ಸೋಲಿನ ಬಳಿಕವೇ ಉಭಯ ಆಟಗಾರರು ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಉಭಯ ಆಟಗಾರರು ಈ ವಿಚಾರವನ್ನು ಅಧಿಕೃತವಾಗಿ ಎಲ್ಲಿಯೂ ಇದುವರೆಗೆ ಹೇಳಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!