ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು ಹೊಸ ಆತಂಕ ಸೃಷ್ಟಿಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 339 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿವೆ. ಈ ಮೂಲಕ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1492ಕ್ಕೆ ಏರಿದೆ.