ಮಹಿಳೆ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ರಾಜಕೀಯ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ, ಹುಬ್ಬಳ್ಳಿ:

ಬೆಳಗಾವಿ ಜಿಲ್ಲೆಯ ಹೊಸ ವಂಟಮೂರಿ ಗ್ರಾಮದ ಮಹಿಳೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಅವರ ವಿರುದ್ಧ ಹರಿಹಾಯ್ದರು.

ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಸಿ ಬಿಜೆಪಿ ಸತ್ಯಶೋಧನ ತಂಡ ರಚಿಸಿರುವುದಕ್ಕೆ ಶನಿವಾರ ನಗರದ ಮಾಧ್ಯಮದವರೊಂದಿಗೆ ಪ್ರತಿಕ್ರಿಸಿದ ಅವರು, ಈ ಪ್ರಕಣಕ್ಕೆ ಸಂಬಂಸಿ ಆರೋಪಿಗಳನ್ನು ಬಂಸಲಾಗಿದೆ. ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೃಹ ಸಚಿವರು ಸಂತ್ರಸ್ತೆ ಮಹಿಳೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಅಷ್ಟಾದರೂ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದರು.

ನ್ಯಾಶನಲ್ ಅಪರಾಧ ಬ್ಯುರೋ ದಾಖಲಾದ ಪ್ರಕರಣ ನೋಡಿದರೇ ಬಿಜೆಪಿ ಅವಯಲ್ಲಿ ಅತೀ ಹೆಚ್ಚು ಮಹಿಳೆಯರ ಮೇಲೆ ದೌರ್ಜನ್ಯ ನಡೆದಿವೆ. ಯಾವ ಸರ್ಕಾರ ಅವಯಲ್ಲಿ ಇಂತಹ ಘಟನೆಗಳು ನಡೆಯಬಾರದು. ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸವಾಗಿದೆ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಮಹಿಳೆಯ ಮೇಲಿನ ದೌರ್ಜನ್ಯ ಖಂಡನೀಯ.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಉತ್ತರ ಪ್ರದೇಶದ ಶಾಸಕ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಬಗ್ಗೆ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ ಹೆಸರು ನಾಮಕರಣ ಮಾಡುವ ಬಗ್ಗೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸರ್ಕಾರ ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.

ಸಂಸತ್ ಭವನದ ಭದ್ರತಾ ಲೋಪ ಆಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಅದು ಆಗಿರುವುದು ನಿಜಾ? ಇದರಲ್ಲಿ ರಾಜಕೀಯ ಮಾಡಲು ಏನು ಇದೆ. ಜಾತಿ ಜನಗಣತಿ ವರದಿ ಇನ್ನೂ ಬಂದಿಲ್ಲ. ಅದರಲ್ಲಿ ಏನು ಇದೆ ಎಂದು ಯಾರಿಗೂ ಗೊತ್ತಿಲ್ಲ. ವೀರಶೈವ ಲಿಂಗಾಯತ ನಾಯಕರು ಊಹೆ ಮೇಲೆ ವರದಿ ಘೋಷಿಸಬಾರದು ಎಂದು ಮನವಿ ಸಲ್ಲಿಸಿದ್ದಾರೆ ಅಷ್ಟೇ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!